ಶ್ರೀರಾಘವೇಶ್ವರಭಾರತೀ ಸ್ವಾಮಿಗಳು

 

Photogalleryಅವಿಚ್ಛಿನ್ನ ಪರಂಪರೆಯ  ಶ್ರೀ ಮಹಾಸಂಸ್ಥಾನದ ಈಗಿನ ಪೀಠಾಧಿಪತಿಗಳಾಗಿರುವ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು – ಪರಮಪೂಜ್ಯರೂ, ಮಹಾನ್ ತಪಸ್ವಿಗಳೂ, ಶ್ರೇಷ್ಠ ವಿದ್ವಾಂಸರೂ ಆಗಿದ್ದ ಬ್ರಹ್ಮಲೀನ ಶ್ರೀ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳವರಿಂದ 1994 ರ ಏಪ್ರಿಲ್ ನಲ್ಲಿ ಸಂನ್ಯಾಸಧೀಕ್ಷೆ ಪಡೆದರು.

1999ರ ಏಪ್ರಿಲ್ ನಲ್ಲಿ ಪೀಠಾರೋಹಣ ಮಾಡಿದಂದಿನಿಂದ ಜೀವ ಜಗತ್ತಿನ ಶಾಂತಿ  ಸಮೃದ್ಧಿಗಾಗಿ ತಮ್ಮನ್ನು ಸಮರ್ಪಿಸಿಕೊಂಡರು. ಆಧ್ಯಾತ್ಮದ ಬಲದಿಂದ ಜನಸಮುದಾಯವನ್ನು ಬೆಳಕಿನೆಡೆಗೆ ಕೊಂಡೊಯ್ಯುತ್ತಿರುವ ಜೀವ ಕಾರುಣ್ಯದ ನೆಲೆಯಾಗಿರುವ ಶ್ರೀ ಶ್ರೀಗಳವರು ಈ ಜಗತ್ತು ಅವಿರತವಾಗಿ ಅನಂತಕಾಲದವರೆಗೂ ಪರಮಾನಂದದಲ್ಲಿ ನಿರತವಾಗಲೆನ್ನುವ ಸಂಕಲ್ಪದಿಂದ ಕಾರ್ಯನಿರತರಾಗಿದ್ದಾರೆ.

ಪರಮಪೂಜ್ಯರ ಧೀಶಕ್ತಿ, ಪ್ರಜ್ಞಾವಂತಿಕೆ, ತಪೊಬಲ, ಜೀವದಯೆ ಅವರನ್ನು ಈ ಜಗತ್ತಿನ ಶ್ರೇಷ್ಟ ಅಧ್ಯಾತ್ಮನಾಯಕರನ್ನಾಗಿಸಿವೆ.